ಅಱಿಯದವರೊಡನೆ ಸಂಗವ ಮಾಡಿದರೆ ಕಲ್ಲ ಹೊಯ್ದು ಕಿಡಿಯ ತೆಗೆದುಕೊಂಬಂತೆ! ಬಲ್ಲವರೊಡನೆ ಸಂಗವ ಮಾಡಿದರೆ ಮೊಸರ ಹೊಸೆದು ಬೆಣ್ಣೆಯ ತೆಗೆದುಕೊಂಬಂತೆ ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಶರಣರ ಸಂಗ ಕರ್ಪುರಗಿರಿಯ […]
ನೆಲದ ಮರೆಯ ನಿಧಾನದಂತೆ ಫಲದ ಮರೆಯ ರುಚಿಯಂತೆ ಶಿಲೆಯ ಮರೆಯ ಹೇಮದಂತೆ ತಿಲದ ಮರೆಯ ತೈಲದಂತೆ ಮರದ ಮರೆಯ ತೇಜದಂತೆ ಭಾವದ ಮರೆಯ ಬ್ರಹ್ಮವಾಗಿಪ್ಪ ಚೆನ್ನಮಲ್ಲಿಕಾರ್ಜುನನ […]
ಕಾಯಕ್ಕೆ ನೆಳಲಾಗಿ ಕಾಡಿತ್ತು ಮಾಯೆ! ಪ್ರಾಣಕ್ಕೆ ಮನವಾಗಿ ಕಾಡಿತ್ತು ಮಾಯೆ! ಮನಕ್ಕೆ ನೆನಹಾಗಿ ಕಾಡಿತ್ತು ಮಾಯೆ! ನೆನಹಿಂಗೆ ಅಱಿವಾಗಿ ಕಾಡಿತ್ತು ಮಾಯೆ! ಜಗದ ಜಂಗುಳಿಗೆ ಬೆಂಗೋಲನೆತ್ತಿ […]
ಹೊಯಿದವರೆನ್ನ ಹೊರೆದವರೆಂಬೆ, ಬಯಿದವರೆನ್ನ ಬಂಧುಗಳೆಂಬೆ, ನಿಂದಿಸಿದವರೆನ್ನ ತಂದೆತಾಯಿಗಳೆಂಬೆ, ಆಳಿಗೊಂಡವರೆನ್ನ ಆಳ್ದರೆಂಬೆ, ಜರೆದವರೆನ್ನ ಜನ್ಮಬಂಧುಗಳೆಂಬೆ, ಹೊಗಳಿದವರೆನ್ನ ಹೊನ್ನಶೂಲದಲಿಕ್ಕಿದರೆಂಬೆ ಕೂಡಲಸಂಗಮದೇವಾ! […]
ಕೋಲತುದಿಯ ಕೋಡಗದಂತೆ, ನೇಣತುದಿಯ ಬೊಂಬೆಯಂತೆ, ಆಡಿದೆನಯ್ಯ ನೀನಾಡಿಸಿದಂತೆ! ನಾ ನುಡಿದೆನಯ್ಯ ನೀ ನುಡಿಸಿದಂತೆ! ನಾನಿದ್ದೆನಯ್ಯ ನೀನಿರಿಸಿದಂತೆ ಜಗದ ಯಂತ್ರವಾಹಕ ಚೆನ್ನಮಲ್ಲಿಕಾರ್ಜುನ ಸಾಕೆಂಬನ್ನಕ್ಕ! […]
ಹರಿವ ಹಾವಿಗಂಜೆ, ಉರಿಯ ನಾಲಗೆಗಂಜೆ, ಸುರಗಿಯ ಮೊನೆಗಂಜೆ! ಒಂದಕ್ಕಂಜುವೆ, ಒಂದಕ್ಕಳುಕುವೆ, ಪರಸ್ತ್ರೀ ಪರಧನವೆಂಬ ಜೂಬಿಂಗಂಜುವೆ! ಮುನ್ನಂಜದ ರಾವಣನೇವಿಧಿಯಾದ! ಅಂಜುವೆನಯ್ಯಾ ಕೂಡಲಸಂಗಮದೇವಾ! […]
“ನೀ ಹೀಂಗ ನೋಡಬ್ಯಾಡ ನನ್ನ” ಎಂಬುದು ಅಂಬಿಕಾತನಯದತ್ತ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ವರಕವಿ ದ. ರಾ. ಬೇಂದ್ರೆಯವರ […]
’ಶಾನುಭೋಗರ ಮಗಳು’ ಎಂಬುದು ಕೆ.ಎಸ್. ನರಸಿಂಹಸ್ವಾಮಿಯವರ ’ಮೈಸೂರ ಮಲ್ಲಿಗೆ’ ಕವನಸಂಕಲನದಲ್ಲಿನ ಒಂದು ಭಾವಗೀತೆ. ಈ ಸಂಕಲನದಲ್ಲಿ ಮನಸೆಳೆಯುವ, ಸಹೃದಯರಿಗೆ ಆಪ್ಯಾಯಮಾನವಾಗುವ ಭಾವಗೀತೆಗಳಲ್ಲಿ ಇದೂ […]
ತೆರಣಿಯ ಹುಳು ತನ್ನ ಸ್ನೇಹದಿಂದ ಮನೆಯ ಮಾಡಿ ತನ್ನ ನೂಲು ತನ್ನನೇ ಸುತ್ತಿ ಸುತ್ತಿ ಸಾವ ತೆರನಂತೆ! ಮನ ಬಂದುದ ಬಯಸಿ ಬಯಸಿ ಬೇವುತ್ತಿರುವೆನಯ್ಯ! ಅಯ್ಯ, […]
ಹಾವು ತಿಂದವರ ನುಡಿಸಬಹುದು! ಗರ ಹೊಡೆದವರ ನುಡಿಸಬಹುದು! ಸಿರಿಗರ ಹೊಡೆದವರ ನುಡಿಸಲು ಬಾರದು ನೋಡಯ್ಯಾ! ಬಡತನವೆಂಬ ಮಂತ್ರವಾದಿ ಹೊಗಲು ಒಡನೆ ನುಡಿವರಯ್ಯ ಕೂಡಲಸಂಗಮದೇವಾ […]