ನೆಲದ ಮರೆಯ ನಿಧಾನದಂತೆ ಫಲದ ಮರೆಯ ರುಚಿಯಂತೆ ಶಿಲೆಯ ಮರೆಯ ಹೇಮದಂತೆ ತಿಲದ ಮರೆಯ ತೈಲದಂತೆ ಮರದ ಮರೆಯ ತೇಜದಂತೆ ಭಾವದ ಮರೆಯ ಬ್ರಹ್ಮವಾಗಿಪ್ಪ ಚೆನ್ನಮಲ್ಲಿಕಾರ್ಜುನನ […]
ಕಾಯಕ್ಕೆ ನೆಳಲಾಗಿ ಕಾಡಿತ್ತು ಮಾಯೆ! ಪ್ರಾಣಕ್ಕೆ ಮನವಾಗಿ ಕಾಡಿತ್ತು ಮಾಯೆ! ಮನಕ್ಕೆ ನೆನಹಾಗಿ ಕಾಡಿತ್ತು ಮಾಯೆ! ನೆನಹಿಂಗೆ ಅಱಿವಾಗಿ ಕಾಡಿತ್ತು ಮಾಯೆ! ಜಗದ ಜಂಗುಳಿಗೆ ಬೆಂಗೋಲನೆತ್ತಿ […]
ಹೊಯಿದವರೆನ್ನ ಹೊರೆದವರೆಂಬೆ, ಬಯಿದವರೆನ್ನ ಬಂಧುಗಳೆಂಬೆ, ನಿಂದಿಸಿದವರೆನ್ನ ತಂದೆತಾಯಿಗಳೆಂಬೆ, ಆಳಿಗೊಂಡವರೆನ್ನ ಆಳ್ದರೆಂಬೆ, ಜರೆದವರೆನ್ನ ಜನ್ಮಬಂಧುಗಳೆಂಬೆ, ಹೊಗಳಿದವರೆನ್ನ ಹೊನ್ನಶೂಲದಲಿಕ್ಕಿದರೆಂಬೆ ಕೂಡಲಸಂಗಮದೇವಾ! […]
ಕೋಲತುದಿಯ ಕೋಡಗದಂತೆ, ನೇಣತುದಿಯ ಬೊಂಬೆಯಂತೆ, ಆಡಿದೆನಯ್ಯ ನೀನಾಡಿಸಿದಂತೆ! ನಾ ನುಡಿದೆನಯ್ಯ ನೀ ನುಡಿಸಿದಂತೆ! ನಾನಿದ್ದೆನಯ್ಯ ನೀನಿರಿಸಿದಂತೆ ಜಗದ ಯಂತ್ರವಾಹಕ ಚೆನ್ನಮಲ್ಲಿಕಾರ್ಜುನ ಸಾಕೆಂಬನ್ನಕ್ಕ! […]
ಹರಿವ ಹಾವಿಗಂಜೆ, ಉರಿಯ ನಾಲಗೆಗಂಜೆ, ಸುರಗಿಯ ಮೊನೆಗಂಜೆ! ಒಂದಕ್ಕಂಜುವೆ, ಒಂದಕ್ಕಳುಕುವೆ, ಪರಸ್ತ್ರೀ ಪರಧನವೆಂಬ ಜೂಬಿಂಗಂಜುವೆ! ಮುನ್ನಂಜದ ರಾವಣನೇವಿಧಿಯಾದ! ಅಂಜುವೆನಯ್ಯಾ ಕೂಡಲಸಂಗಮದೇವಾ! […]
ತೆರಣಿಯ ಹುಳು ತನ್ನ ಸ್ನೇಹದಿಂದ ಮನೆಯ ಮಾಡಿ ತನ್ನ ನೂಲು ತನ್ನನೇ ಸುತ್ತಿ ಸುತ್ತಿ ಸಾವ ತೆರನಂತೆ! ಮನ ಬಂದುದ ಬಯಸಿ ಬಯಸಿ ಬೇವುತ್ತಿರುವೆನಯ್ಯ! ಅಯ್ಯ, […]
ಹಾವು ತಿಂದವರ ನುಡಿಸಬಹುದು! ಗರ ಹೊಡೆದವರ ನುಡಿಸಬಹುದು! ಸಿರಿಗರ ಹೊಡೆದವರ ನುಡಿಸಲು ಬಾರದು ನೋಡಯ್ಯಾ! ಬಡತನವೆಂಬ ಮಂತ್ರವಾದಿ ಹೊಗಲು ಒಡನೆ ನುಡಿವರಯ್ಯ ಕೂಡಲಸಂಗಮದೇವಾ […]
ಆನೆಯನೇರಿಕೊಂಡು ಹೋದಿರಿ ನೀವು, ಕುದುರೆಯನೇರಿಕೊಂಡು ಹೋದಿರಿ ನೀವು, ಕುಂಕುಮ ಕಸ್ತೂರಿಯ ಪೂಸಿಕೊಂಡು ಹೋದಿರಿ ಅಣ್ಣಾ; ಸತ್ಯದ ನಿಲುವನರಿಯದೆ ಹೋದಿರಲ್ಲಾ! ಸದ್ಗುಣವೆಂಬ ಫಲವ ಬಿತ್ತದೆ, ಬೆಳೆಯದೆ ಹೋದಿರಲ್ಲಾ! […]
ಏತ ತಲೆವಾಗಿದರೇನು; ಗುರುಭಕ್ತನಾಗಬಲ್ಲುದೆ? ಇಕ್ಕುಳ ಕೈಮುಗಿದರೇನು; ಭೃತ್ಯಾಚಾರಿಯಾಗಬಲ್ಲುದೆ? ಗಿಳಿಯೋದಿದರೇನು; ಲಿಂಗವೇದಿಯಾಗಬಲ್ಲುದೆ? ಕೂಡಲಸಂಗನ ಶರಣರು ಬಂದ ಬರವ ನಿಂದ ನಿಲವ ಅನಂಗಸಂಗಿಗಳೆತ್ತ ಬಲ್ಲರು? […]
ಎಮ್ಮೆಗೊಂದು ಚಿಂತೆ! ಸಮ್ಮಗಾಱನಿಗೊಂದು ಚಿಂತೆ! ನನಗೆ ನನ್ನ ಚಿಂತೆ! ತನಗೆ ತನ್ನ ಕಾಮದ ಚಿಂತೆ! ಒಲ್ಲೆ ಹೋಗು, ಸೆಱಗಬಿಡು ಮರುಳೆ! ನನಗೆ ಚೆನ್ನಮಲ್ಲಿಕಾರ್ಜುನದೇವರು ಒಲಿವನೋ ಒಲಿಯನೋ […]